Header Ads Widget

Responsive Advertisement

ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನ ಆಚರಣೆ


ಸ್ವಾಮಿ ವಿವೇಕಾನಂದ ಅವರ ೧೫೮ ನೇ ಜನ್ಮ ದಿನಾಚರಣೆ ಮತ್ತು ಅಂತರರಾಷ್ಟ್ರೀಯ ಯುವ ದಿನಾಚರಣೆಯನ್ನು ಮಡಿಕೇರಿ ನಗರದ ರಾಘವೇಂದ್ರ ದೇವಾಲಯದ ಬಳಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮೊದಲಿಗೆ ಸ್ಥಳೀಯ ರಾಘವೇಂದ್ರ ದೇವಾಲಯ ವ್ಯಾಪ್ತಿಯಲ್ಲಿರುವ ನಿವಾಸಿಗಳು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿದರು.

ನಂತರ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾದ ಪಿ.ಎಂ.ರವಿಯವರು ಮಾತನಾಡಿ, ಯುವಕರ ಪಾಲಿನ ಸ್ಫೂರ್ತಿಯ ಚಿಲುಮೆ, ಭವ್ಯ ಭಾರತದ ಹೆಮ್ಮೆಯ ಪುತ್ರ ಸ್ವಾಮಿ ವಿವೇಕಾನಂದರು ಜನಿಸಿದ ಪುಣ್ಯ ದಿನವಿಂದು. ಈ ದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಸ್ವಾಮಿ ವಿವೇಕಾನಂದರ ಹೆಸರು ಕೇಳಿದರೆ ಸಾಕು ಮೈ ರೋಮಾಂಚನಗೊಳ್ಳುತ್ತದೆ. ಕಣಕಣದಲ್ಲೂ ದೇಶ ಭಕ್ತಿಯನ್ನು ತುಂಬಿಕೊಂಡಿದ್ದ ಆ ಮಹಾನ್ ಚೇತನ ಭಾರತ ದೇಶದ ವೈಶಿಷ್ಟ್ಯವನ್ನು ವಿಶ್ವಕ್ಕೆ ಪರಿಚಯಿಸಿದವರು ಎಂದ ಪಿ.ಎಂ ರವಿ ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜ.12ನ್ನು ‘ರಾಷ್ಟ್ರೀಯ ಯುವ ದಿನ’ವಾಗಿ ಆಚರಿಸಲಾಗುತ್ತದೆ. “ಏಳಿ ಎದ್ದೇಳಿಗುರಿ ಮುಟ್ಟುವ ತನಕ ನಿಲ್ಲದಿರಿ” ಎಂದು ಯುವಕರಿಗೆ ಕರೆಕೊಟ್ಟ ವಿವೇಕಾನಂದರಿಗೆ ಯುವಶಕ್ತಿಯ ಮೇಲೆ ಅಪಾರವಾದ ನಂಬಿಕೆ ಇತ್ತು. ಯುವಶಕ್ತಿಗಿಂತ ಮಿಗಿಲಾದುದ್ದು ಯಾವುದು ಇಲ್ಲ. ನನಗೆ 100 ಜನ ಗಟ್ಟಿ ಮುಟ್ಟಾದ ಯುವಕರನ್ನು ಕೊಡಿ ನಾವು ನವಭಾರತವನ್ನು ನಿರ್ಮಾಣ ಮಾಡುತ್ತೇನೆ ಎನ್ನುತ್ತಿದ್ದರು ಸ್ವಾಮೀಜಿ. ಯುವಕರು ಹೇಡಿಗಳಾಗಬಾರದು, ನೀವೂ ಎಂದೂ ಪರಾವಲಂಬಿಗಳಲ್ಲ, ನಿಮ್ಮ ಬದುಕಿನ ಶಿಲ್ಪಿಗಳು ನೀವೇ ಎಂಬ ಸ್ವಾಮೀಜಿ ಸಂದೇಶ ಎಂದೆಂದಿಗೂ ಯುವ ಮನಸುಗಳನ್ನು ಎಚ್ಚರಿಸುವಂತದ್ದು ಎಂದು ತಮ್ಮ ಭಾಷಣದಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮಡಿಕೇರಿಯ ಕಿತ್ತೂರು ಚೆನ್ನಮ್ಮ ಮಹಿಳಾ ಸಮಾಜದ ಅಧ್ಯಕ್ಷರು ಹಾಗೂ ಜನನಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ ಶ್ರೀಮತಿ ಕಾನತ್ತಿಲ್‌ ರಾಣಿಅರುಣ್, ಪ್ರಧಾನ ಕಾರ್ಯದರ್ಶಿಗಳಾದ ಕುದುಕುಳಿ ಅನಿತಾಆನಂದ್‌, ಖಜಾಂಚಿಗಳಾದ ಪಿ.ಎಂ. ಕಾವೇರಮ್ಮ, ಪದ್ಮಾವಿಶ್ವನಾಥ್‌, ಜಯಪಾಲಾಕ್ಷ, ತುಳಸಿ, ಜ್ಯೋತಿ, ಜಯಂತಿಬಾಬು, ಗ್ರೀಷ್ಮ, ನೇತ್ರವರದರಾಜ್‌,  ಸಮಿತಾಮನು, ಬೇಬಿ, ಪುಷ್ಪಾ ಹಾಗೂ ಕಲಾನಗರ ಸಾಂಸ್ಕೃತಿಕ ಕಲಾ ವೇದಿಕೆಯ ರವಿ ವಷಿಷ್ಠ, ಉಮೇಶ್‌, ನಾರಾಯಣ್‌ ಸದಸ್ಯರು ಮತ್ತು ಸ್ಥಳಿಯ ನಿವಾಸಿಗಳು ಭಾಗವಹಿಸಿದ್ದರು.


Search Coorg Media: Coorg's Largest Online Media Network