Header Ads Widget

Responsive Advertisement

ಗೋಣಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದಿಂದ ಅಣಬೆ ತರಬೇತಿ ಕಾರ್ಯಕ್ರಮ


ಗೋಣಿಕೊಪ್ಪಲು ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು ಮತ್ತು ಕಾನೂರು ಕೊತೂರು ಮಹಿಳಾ ಸಮಜದ ವತಿಯಿಂದ ಒಂದು ದಿನದ ಅಣಬೆ ತರಬೇತಿ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ತಜ್ಞ ಡಾ.ವೀರೇಂದ್ರ ಕುಮಾರ್ ಕೆ.ವಿ ಇವರು ತಿನ್ನುವ ಅಣಬೆಗಳು ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿವೆ. ಇವುಗಳು ಹೆಚ್ಚು ಸಸಾರಜನಕ, ಮುಖ್ಯವಾದ ಜೀವಸತ್ವಗಳು ಮತ್ತು ಖನಿಜಾಂಶಗಳನ್ನು ಒಳಗೊಂಡಿವೆ. ಅಣಬೆಯಲ್ಲಿ ಸಕ್ಕರೆ ಮತ್ತು ಕೊಬ್ಬಿನ ಅಂಶ ಕಡಿಮೆ ಇರುವುದರಿಂದ ಮಧುಮೇಹ ರೋಗಿಗಳಿಗೆ ಮತ್ತು ಹೃದಯ ರೋಗಿಗಳಿಗೆ ಇದು ಒಂದು ಒಳ್ಳೆಯ ಆಹಾರ. ಈ ಅಣಬೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಫೆÇೀಲಿಕ್ ಆಮ್ಲ ಇರುವುದರಿಂದ ಅನೀಮಿಯಾ ನಿವಾರಕ ಗುಣವನ್ನು ಹೊಂದಿದೆ ಎಂದು ಅವರು ಮಾಹಿತಿ ನೀಡಿದರು.

ಅಣಬೆಯಲ್ಲಿನ ಶರ್ಕಾರಾ ಪಿಷ್ಟವು ಗೆಡ್ಡೆ ನಿರೋಧಕ ಶಕ್ತಿ ಹೊಂದಿರುವುದರಿಂದ ಇದನ್ನು ಕ್ಯಾನ್ಯರ್ ನಿರೋಧಕವಾಗಿ ಬಳಸಲಾಗುತ್ತದೆ. ಅಣಬೆಯಲ್ಲಿ ಇರ್ಮ್ಗೊಸ್ಟಿರಾಲ್ ಎಂಬ ರಾಸಾಯನಿಕವಿದೆ. ಇದು ಮನುಷ್ಯನ ಶರೀರದಲ್ಲಿ ಡಿ ಜೀವಸತ್ವವಾಗಿ ಪರಿವರ್ತನೆಯಾಗಬಲ್ಲದು. ಅಣಬೆಯಲ್ಲಿ ನಾರಿನ ಅಂಶ ಹೆಚ್ಚಾಗಿರುವುದರಿಂದ ಮಲವಿಸರ್ಜನೆಗೆ ಸಹಾಯಕವಾಗಿದೆ ಎಂದು ಡಾ.ವೀರೇಂದ್ರಕುಮಾರ್ ಅವರು ನುಡಿದರು.

ಆದ್ದರಿಂದ ಅಣಬೆಯ ಕೃಷಿಯನ್ನು ಹೆಚ್ಚು ಹೆಚ್ಚು ಜನರು ಕೈಗೊಂಡು ಸ್ವಾವಲಂಬಿಗಳಾಗಿ ಬದುಕಲು ಸಹಾಯವಾಗುತ್ತದೆ ಎಂದು ತಿಳಿಸಿದರು. ನಂತರ ಅಂಬಿಕ ಅವರು ಚಿಪ್ಪು ಅಣಬೆ ಬೇಸಾಯವನ್ನು ಪ್ರಾತ್ಯಕ್ಷಿಕೆಯ ಮೂಲಕ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರನ್ನು ಕಾನೂರು ಕೊತೂರು ಮಹಿಳಾ ಸಮಾಜದ ಅಧ್ಯಕ್ಷರಾದ ಮಾಯಮ್ಮ ಅವರು ಸ್ವಾಗತಿಸಿದರು. ಸುಮಾರು 27 ರೈತ ಮಹಿಳೆಯರು ಈ ತರಬೇತಿಯ ಪ್ರಯೋಜನ ಪಡೆದರು.


Search Coorg Media: Coorg's Largest Online Media Network