Header Ads Widget

Responsive Advertisement

ಸ್ವ-ಸಹಾಯ ಸಂಘಗಳ ನಾಯಕರಿಗೆ, ಸದಸ್ಯರಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ


ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್(ನಬಾರ್ಡ್) ಮತ್ತು ಒಡಿಪಿ ಸಂಸ್ಥೆಯ ಸಹಯೋಗದಲ್ಲಿ ಸ್ವ-ಸಹಾಯ ಸಂಘಗಳ ನಾಯಕರಿಗೆ, ಸದಸ್ಯರಿಗೆ ನಾಯಕತ್ವ ತರಬೇತಿ ಕಾರ್ಯಕ್ರಮವು ಇತ್ತೀಚೆಗೆ ಮಹಿಳೋದಯ ಮಹಿಳಾ ಒಕ್ಕೂಟದ ಕಚೇರಿಯಲ್ಲಿ ನಡೆಯಿತು.

ಮೈಸೂರು ಒಡಿಪಿ ಸಂಸ್ಥೆಯ ನಿರ್ದೇಶಕರಾದ ಆಲೆಕ್ಸ್ ಪ್ರಶಾಂತ್ ಸಿಕ್ವೇರಾ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಮಹಿಳೆಯರು ನಾಯಕತ್ವದ ಮೂಲಕ ತಮ್ಮ ಗ್ರಾಮ, ದೇಶವನ್ನು ಮುನ್ನಡೆಸಬೇಕು. ನಬಾರ್ಡ್ ಮತ್ತು ಒಡಿಪಿ ಸಂಸ್ಥೆ ಹಲವಾರು ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಶ್ರಮಿಸುತ್ತಿದೆ. ರೈತರಿಗೆ ಮಾರುಕಟ್ಟೆ ಕಲ್ಪಿಸಲು ಆರ್ಥಿಕ ಅಭಿವೃದ್ಧಿಗೆ ಹಾಗೂ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾದ ಮಹಿಳೆಯರಿಗೆ ರೂರಲ್ ಮಾರ್ಟ್ ಮಳಿಗೆಯನ್ನು ಸ್ಥಾಪಿಸಿದೆ. ಉತ್ಪನ್ನಗಳ ಮಾರಾಟಕ್ಕೆ ವ್ಯವಸ್ಥೆಯನ್ನು, ಸಂಸ್ಥೆಗಳ ಮೂಲಕ ಕಲ್ಪಿಸಲಾಗಿದೆ.

ಮಹಿಳೆಯರು ನಾಯಕತ್ವ, ಮುಂದಾಳತ್ವ, ಜವಾಬ್ದಾರಿ ವಹಿಸಿ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಸಬಲರಾಗಬೇಕು. ತಾವು ತಿಳಿದ ಜ್ಞಾನವನ್ನು ದೀಪದ ಬೆಳಕಿನಂತೆ ಇತರರಿಗೆ ಹಂಚಬೇಕು ಎಂದು ತಿಳಿಸಿದರು.

ತರಬೇತಿ ಕಾರ್ಯಕ್ರಮವನ್ನು ನಬಾರ್ಡ್ ಜಿಲ್ಲಾ ವ್ಯವಸ್ಥಾಪಕರಾದ ಶ್ರೀನಿವಾಸ್ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ ನಬಾರ್ಡ್ ಯೋಜನೆಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರವಾಗಿದೆ. ಸ್ವ-ಸಹಾಯ ಸಂಘಗಳ ಮೂಲಕ ಕೌಶಲ್ಯ ತರಬೇತಿಗಳನ್ನು ನೀಡಿ ಸ್ವ ಉದ್ಯೋಗ ಮಾಡುವುದರ ಮೂಲಕ ಆರ್ಥಿಕ ಸ್ವಾವಲಂಬಿಗಳಾಗಲು ಶ್ರಮಿಸುತ್ತಿದೆ ಎಂದರು.