ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಗುಮಾಸ್ತರ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ 

ಮಡಿಕೇರಿ ಆ.22: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್‍ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲಾಗುತ್ತದೆ. 

ಆಸಕ್ತರು ಆಗಸ್ಟ್, 29 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ  ಕುಲಸಚಿವರಾದ ಡಾ.ಎ.ಖಾದರ್ ಪಾಷ ಅವರು ತಿಳಿಸಿದ್ದಾರೆ.